ದಾವಣಗೆರೆ, ಫೆ.23- ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ 50ನೇ ವರ್ಷದ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ನಾಳೆ ದಿನಾಂಕ 24ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಪ್ರೊ.ಬಿ. ಕೃಷ್ಣಪ್ಪನವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬುಳಸಾಗರ ಸಿದ್ರಾಮಣ್ಣ, ವಿಜಯಮ್ಮ, ಪ್ರದೀಪ್ ಕೆಟಿಜೆ ನಗರ, ಮಂಜುನಾಥ, ಅಣಜಿ ಹನುಮಂತಪ್ಪ, ಮೆಳ್ಳೇಕಟ್ಟೆ ಪರಶುರಾಮಪ್ಪ, ಕೊಡಗನೂರು ಲಕ್ಷ್ಮಣ್, ಬೇತೂರು ಹನುಮಂತಪ್ಪ, ಶಂಕರ್, ಆವರಗೊಳ್ಳ ದೊಡ್ಡಪ್ಪ ಇತರರು ಉಪಸ್ಥಿತರಿದ್ದರು.