ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ನಡೆಯುತ್ತಿರುವ `ತರಳಬಾಳು ಹುಣ್ಣಿಮೆ ಮಹೋತ್ಸವ’ದಲ್ಲಿ ಇಂದು ಸಂಜೆ 6 ಗಂಟೆಗೆ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಾಸಕರುಗಳಾದ ಡಿ.ಜಿ. ಶಾಂತನಗೌಡ, ಹೆಚ್.ಎಂ. ಗಣೇಶ್ ಪ್ರಸಾದ್, ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಪ್ರೊ. ಗಿಲ್ ಬೆನ್ ಹೆರುಟ್ (ಇಸ್ರೇಲ್) ಅತಿಥಿಗಳಾಗಿದ್ದಾರೆ.
`ಕುವೆಂಪು ಮತ್ತು ವಿಶ್ವ ಮಾನವ ಸಂದೇಶ’ ಕುರಿತು ವಿಶ್ರಾಂತ ಕುಲಪತಿ ಡಾ. ಕೆ. ಚಿದಾನಂದ ಗೌಡ ಮತ್ತು `ಗುರು ಮಹಿಮೆ’ ವಿಷಯ ಕುರಿತು ಹಿರೇಮಗಳೂರು ಕಣ್ಣನ್ ಅವರುಗಳು ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಪಿಯರ್ ಸಿಲ್ವನ್ ಫಿಲಿಯೋಜಾ, ಶ್ರೀಮತಿ ವಸುಂಧರಾ ಫಿಲಿಯೋಜಾ (ಪ್ಯಾರೀಸ್), ವೀರ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ತಾಯಿ – ತಂದೆ ಶ್ರೀಮತಿ ಕೆ.ಪಿ. ಅನುರಾಧ, ಎಂ. ವೆಂಕಟೇಶ್ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಗುತ್ತದೆ.