ಹಳೇ ಬಸ್ ನಿಲ್ದಾಣದಲ್ಲಿ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಇಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ವಿ.ಅಂಜಿನಪ್ಪ ಹಾಗೂ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮೈದೂರು ಕೆ.ಕುಬೇರಪ್ಪ ಅವರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿ ಈಚೆಗೆ ಆದೇಶ ಹೊರಡಿಸಿದ್ದರು. ಈರ್ವರ ಪದಗ್ರಹಣ ಕಾರ್ಯಕ್ರಮ ದಲ್ಲಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್, ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿರಾಜ್ ಶೇಖ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮತ್ತು ಇತರರು ಪಾಲ್ಗೊಳ್ಳುವರು.
January 12, 2025