ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ: 3132 ಗೈರು

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ: 3132 ಗೈರು

ದಾವಣಗೆರೆ, ಫೆ. 25- ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪೊಲೀಸ್ ವತಿಯಿಂದ  ಎಲ್ಲಾ  ಪರೀಕ್ಷಾ ಕೇಂದ್ರಗಳ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. 8,240 ಪರೀಕ್ಷಾ ಅಭ್ಯರ್ಥಿಗಳಲ್ಲಿ 5,108 ಅಭ್ಯರ್ಥಿಗಳು ಹಾಜರಾಗಿದ್ದು, 3132 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ. ಸಂತೋಷ್ ಅವರು  ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

error: Content is protected !!