ವೃದ್ಧಾಪ್ಯದಲ್ಲಿ ಮಕ್ಕಳು ತಂದೆ-ತಾಯಿಗೆ ಆಸರೆಯಾಗಲಿ

ವೃದ್ಧಾಪ್ಯದಲ್ಲಿ ಮಕ್ಕಳು ತಂದೆ-ತಾಯಿಗೆ ಆಸರೆಯಾಗಲಿ

‘ಮಾತೃ-ಪಿತೃ ವಂದನಾ’ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಂದೆ-ತಾಯಿ ಪಾದ ಪೂಜೆ ಮಾಡಿದರು.

ದಾವಣಗೆರೆ, ಫೆ. 25 – ವೃದ್ಧಾಪ್ಯದಲ್ಲಿ ಮಕ್ಕಳು ತಂದೆ-ತಾಯಿ ಯರನ್ನು ಪ್ರೀತಿಯಿಂದ ನೋಡಿಸುವ ಅವರ ಬದುಕಿಗೆ ಆಸರೆಯಾಗ ಬೇಕೆಂದು ಆರ್‌ಜಿಎಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಜನ ಹಳ್ಳಿ ಜಿ.ಶ್ರೀನಿವಾಸಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರಶಾಂತಿ ಸಭಾಂಗಣದಲ್ಲಿ ನಿನ್ನೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಪಾದ ಪೂಜೆ ನೆರವೇರಿಸುವ ‘ಮಾತಾ-ಪಿತೃ ವಂದನಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೊಂದು ಹೃದಯಸ್ಪರ್ಶಿ ಕಾರ್ಯಕ್ರಮ ಪೋಷಕರಿಗೆ ಪಾದಪೂಜೆ ನೆರವೇರಿಸುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ ಈಶ್ವರಮ್ಮ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಈ ಅದೃಷ್ಟ ದೊರೆತಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದೊಂದು ಜೀವನದ ತಿರುವಿನಂಶವಾಗಿದೆ ಎಂದರು.

ಪೋಷಕರು ಮಕ್ಕಳಿಗೆ ಒತ್ತಡ ಹೇರದೆ, ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ ಅದೇ ಕ್ಷೇತ್ರದಲ್ಲಿ ಮುಂದುವರೆದು ಸಾಧಿಸಲು ಪ್ರೋತ್ಸಾಹಿಸಬೇಕು. ಮಕ್ಕಳು ಎಷ್ಟೇ ಹಣ ಗಳಿಸಿದರೂ, ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಪ್ರೀತಿಯ ಆಸರೆಯಾಗಿರಬೇಕು. ಅವರಿಗೆ ಊರುಗೋಲಿನ ಅವಶ್ಯಕತೆ ಬೀಳದಂತೆ, ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದರು.

ವಾಸವಿ ಮಹಿಳಾ ಮತ್ತು ಯುವತಿಯರ ಸಂಘದ ಅಧ್ಯಕ್ಷೆ ಹೇಮಾ ಶ್ರೀನಿವಾಸ ಮಾತನಾಡಿ, ಮಕ್ಕಳು ತಪ್ಪು ಮಾಡುವುದು ಸಹಜ. ಭಾರತೀಯ ಸಂಸ್ಕೃತಿಯಲ್ಲಿ ತಂದೆ-ತಾಯಿಗಳ ಪಾದಕ್ಕೆ ನಮಸ್ಕರಿಸಿ, ಕ್ಷಮೆ ಕೋರುವುದು ವಿಭನ್ನವಾಗಿದೆ. ನಮಸ್ಕಾರ ಎನ್ನುವುದು ತಪ್ಪಿಗೆ ವಿರಾಮವಾಗಬೇಕು; ಪುನರಾವರ್ತನೆಯಾಗಬಾರದು. ಮಕ್ಕಳು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು, ಚೆನ್ನಾಗಿ ಓದಿ ಹೆಚ್ಚು ಅಂಕಗಳನ್ನು ಗಳಿಸಬೇಕೆಂಬುದು ಪ್ರತಿಯೊಬ್ಬ ತಂದೆ-ತಾಯಿಯರ ಆಸೆಯಾಗಿರುತ್ತದೆ. ಮಕ್ಕಳು ಸಂಸ್ಕಾರವಂತರಾಗಿ ಪೋಷಕರ ಆಸೆಯನ್ನು ನೇರವೇರಿಸಬೇಕೆಂದು ಸಲಹೆ ನೀಡಿದರು.

ಈಶ್ವರಮ್ಮ ಶಾಲಾಡಳಿತ ಮಂಡಳಿ ಸದಸ್ಯೆ ಕೆ.ವಿ.ಸುಜಾತ ಮಾತನಾಡಿ, ಅಮ್ಮನ ಮಮತೆ ಆಕಾಶದಷ್ಟು ವಿಶಾಲ. ಅಪ್ಪನ ಉದಾರತೆ ಆಕಾಶದಲ್ಲಿ ಮಿನುಗುವ ಲೆಕ್ಕವಿರದಷ್ಟು ನಕ್ಷತ್ರ ಗಳಿದ್ದಂತೆ. ಪುರಾಣ ಕಾಲದಿಂದ ತಂದೆ-ತಾಯಿಯರ ಹೆಸರಿನ ಜೊತೆಗೆ ಮಹಾತ್ಮರ ಹೆಸರನ್ನು ಸೇರಿಸಿ, ಹೇಳುವುದನ್ನು ಕೇಳಿದ್ದೇವೆ. ಆದ್ದರಿಂದ ತಂದೆ-ತಾಯಿಯರಿಗೆ ಗೌರವಿಸಿ, ಒಳ್ಳೆಯ ಕೆಲಸ  ಮಾಡಬೇಕೆಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಡಳಿತ ಮಂಡಳಿಯ ಅಧ್ಯಕ್ಷೆ ಕೆ.ಆರ್.ಸುಜಾತ ಕೃಷ್ಣ, ಶಾಲೆಯ ಸಂಸ್ಥಾಪಕ ಮಾತೃಸ್ವರೂಪಿ ಗಳಾದ ಬಿ.ಆರ್.ಶಾಂತಕುಮಾರಿ ಯವರ ಆದರ್ಶಗಳು ನಮ್ಮೆಲ್ಲರಲ್ಲಿ ಮೇಳೈಸಿವೆ. ಯಾರು ತಂದೆ-ತಾಯಿಗಳನ್ನು ಗೌರವಿಸುತ್ತಾರೋ, ಅವರನ್ನು ಎಲ್ಲರೂ ಗೌರವಿಸುತ್ತಾರೆ. ನಿಸ್ವಾರ್ಥ ಪ್ರೇಮವನ್ನು ತಂದೆ-ತಾಯಿಗಳಲ್ಲಿ ಮಾತ್ರ ನೋಡ ಲು ಸಾಧ್ಯ. ತಂದೆ-ತಾಯಿ, ಗುರುಗಳನ್ನು ಗೌರವಿಸ ಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್, ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಶಶಿರೇಖಾ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!