ಹರಿಹರ, ಫೆ. 27- ತಾಲ್ಲೂಕಿನ ದೇವರಬೆಳಕೆರೆ ಗ್ರಾಮದಲ್ಲಿ ನಾಡಿದ್ದು ದಿನಾಂಕ 29ರ ಗುರುವಾರ ಸಂಜೆ 4.30 ಕ್ಕೆ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ರಥೋತ್ಸವ ಜರುಗಲಿದೆ.
ಮಾರ್ಚ್ 1 ರಂದು ಶುಕ್ರವಾರ ಸಂಜೆ 4 ಗಂಟೆಗೆ ಕಾಲಶಸ್ತ್ರ, ತ್ರಿಶೂಲ ಮತ್ತು ಸರಪಳಿ ಪವಾಡಗಳು ನಡೆಯಲಿವೆ. ಅಂದು ಸಂಜೆ 5 ಗಂಟೆಗೆ ಶ್ರೀ ಸ್ವಾಮಿಯ ಓಕುಳಿ ನಡೆಯಲಿದೆ.