`ಬೇಟಿ ಬಚಾವೊ, ಬೇಟಿ ಪಡಾವೋ’ ಅಭಿಯಾನ ಆರಂಭ

`ಬೇಟಿ ಬಚಾವೊ, ಬೇಟಿ ಪಡಾವೋ’ ಅಭಿಯಾನ ಆರಂಭ

ಜಿಲ್ಲೆಯ ಪಿಯು ವಿದ್ಯಾರ್ಥಿನಿಯರಿಗೆ ಅಭಿಯಾನ ಪತ್ರ ವಿತರಣೆ

ದಾವಣಗೆರೆ,ಫೆ.27- ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶಿಕ್ಷಣ ಮುಂದುವರೆಸಲು `ಬೇಟಿ ಬಚಾವೋ, ಬೇಟಿ ಪಡಾವೋ’ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ  ಅಭಿಯಾನಕ್ಕೆ  ಚಾಲನೆ ನೀಡಲಾಯಿತು. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್  ಅವರುಗಳು ಶುಭಾಶಯ ಪತ್ರ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಪಿ.ಯು.ಸಿ ನಂತರ ಮುಂದಿನ ಶಿಕ್ಷಣ ಮುಂದುವರೆಸುವ ಮೂಲಕ ತಮ್ಮ ಭವಿಷ್ಯ ಭವ್ಯವಾಗಿರಲೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿನಿಯರಿಗೆ ಅಭಿಯಾನ ಪತ್ರವನ್ನು ನೀಡಲಾಗುತ್ತಿದೆ. 

ಶಿಕ್ಷಣ ಕೇವಲ ಜ್ಞಾನಾರ್ಜನೆ ಮಾತ್ರವಲ್ಲ, ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಶಿ

ಕ್ಷಣ ವೈಯಕ್ತಿಕ ಬದುಕಿನ ಸೌಂದರ್ಯ ಹೆಚ್ಚಿಸುವ ಆಭರಣವಾಗಿದೆ.  ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಿಕ್ಷಣ ಮುಂದುವರೆಸಿ ಸ್ವಾವಲಂಬಿಗಳಾಗಿ, ಬದುಕು ಕಟ್ಟಿಕೊಳ್ಳಿರಿ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್  ಇದೇ ವೇಳೆ ತಿಳಿಸಿದರು. 

  ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರಿನ್ ಭಾನು ಎಸ್.ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಉಪಸ್ಥಿತರಿದ್ದರು.

error: Content is protected !!