ಮೋದಿ ನಾಯಕತ್ವದಲ್ಲಿ ಭಾರತ ಸದೃಢ, ಸುಭದ್ರ

ಮೋದಿ ನಾಯಕತ್ವದಲ್ಲಿ ಭಾರತ ಸದೃಢ, ಸುಭದ್ರ

`ದೇಶದ ಜನತೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ’ – ಸಂಸದ ಜಿ.ಎಂ.ಸಿದ್ದೇಶ್ವರ  

ಕೇಂದ್ರದ ಯೋಜನೆಗಳ ಫಲಾನುಭವಿಗಳ ಸಂಪರ್ಕ ಅಭಿಯಾನದಲ್ಲಿ ಶಾಸಕ ಹರೀಶ್

ಹರಿಹರ, ಮಾ.1- ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಿಂದಲೇ ಭಾರತ ದೇಶವು ಸದೃಢವಾಗಿ, ಸುಭದ್ರವಾಗಿ ಅಭಿವೃದ್ಧಿ ರಾಷ್ಟ್ರವಾಗಿ ವಿಶ್ವಗುರು ಸ್ಥಾನದತ್ತ ದಾಪುಗಾಲಿಟ್ಟಿದೆ ಎಂದು ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕಾಟ್ವೆ ಭವನದಲ್ಲಿ ಇಂದು  ನಡೆದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. 

ನರೇಂದ್ರ ಮೋದಿಯವರ ನಾಯಕತ್ವವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಸತತ ಎರಡನೇ ಬಾರಿಗೆ ಪ್ರಧಾನಿಯಾಗಿರುವ ಮೋದಿಯವರು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯು ತ್ತಿದ್ದಾರೆ. 

ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಈ ಬಾರಿಯೂ ಕೂಡ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋದು ನಮ್ಮೆಲ್ಲರ ಕರ್ತವ್ಯವಾಗಿದೆ. ಜನರಿಗಾಗಿ ಅವರು ತಂದಂತಹ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯವನ್ನು ಮಾಡುವ ಉದ್ದೇಶದಿಂದ ಫಲಾನುಭವಿಗಳ ಸಂಪರ್ಕ ಅಭಿಯಾನವೆಂಬ ಕಾರ್ಯಾಗಾರವನ್ನು ಹಮ್ಮಿಕೊ ಳ್ಳಲಾಗಿದೆ ಎಂದರು.

ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಸೀಟುಗಳನ್ನು ನಾವೂ ಗೆಲ್ಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಂದಂತಹ ಯೋಜನೆಗಳನ್ನು ಪಡೆದಂತಹ ಫಲಾನುಭವಿಗಳನ್ನು ಗುರುತಿಸಿ ಸಂಪರ್ಕಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಸುವಂತೆ ಕೇಳಬೇಕು ಎಂದು ಅವರು ತಿಳಿಸಿದರು.

ಫಲಾನುಭವಿಗಳ ಸಂಪರ್ಕ ಅಭಿಯಾನದ ಜಿಲ್ಲಾ ಸಂಚಾಲಕ ಬಿ.ಜೆ.ಅಜಯಕುಮಾರ್ ಮಾತನಾಡಿ, ವಿಶ್ವವೇ ಮೆಚ್ಚಿದ ನಾಯಕರೆಂದರೆ ಅದು ನಮ್ಮ ಮೋದಿಯವರು.  ಅವರು ತಂದಂತಹ ಯೋಜನೆಗಳನ್ನು ಜನರು ಹೇಗೆ ಪಡೆದುಕೊಂಡಿ ದ್ದಾರೆ, ಯಾರೆಲ್ಲ ಪಡೆದುಕೊಂಡಿದ್ದಾರೆ ಎಂಬುದನ್ನು ತಿಳಿಯಲು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗಿದೆ‌ ಎಂದು ತಿಳಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು   ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್ ವಹಿಸಿದ್ದರು. ತಾಲೂಕು ಸಂಚಾಲಕಿ ರೂಪಾ  ಶಶಿಕಾಂತ್ ಹಾಗೂ ಗುಡದಳ್ಳಿ ಮಹಾಂತೇಶ, ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಚಂದ್ರಶೇಖರ ಪೂಜಾರ್ ಮಾತನಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐರಣಿ ಅಣ್ಣೇಶ್,  ಸಹ ಸಂಚಾಲ ಕರಾದ ಅಮರ್, ಸುನೀಲಕುಮಾರ್, ಸಿದ್ದೇಶ್ ಕರೂರು, ಶ್ರೀಕಾಂತ್  ಮತ್ತಿತರರು ಉಪಸ್ಥಿತರಿದ್ದರು.

error: Content is protected !!