ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಚಾಲನೆ

ದಾವಣಗೆರೆ, ಮಾ. 3 – ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ. ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟು ಮಾಡುತ್ತದೆ. ಕಡ್ಡಾಯವಾಗಿ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ತಾಯಂದಿರಿಗೆ ಕಿವಿಮಾತು ಹೇಳಿದರು.

ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡು ಬರುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿ ಯೋ ಪ್ರಕರಣಗಳು ವರದಿಯಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ದೇವರಾಜ್ ಪಟಗ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಮುಖಂಡರಾದ ಗೋಪಾಲಣ್ಣ, ಆರೋಗ್ಯ ಅಧಿಕಾರಿಗಳಾದ ಗೋವಿಂದರಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!