ಅಖಿಲ ಭಾರತ ಶಿವಾಚಾರ್ಯ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಾವಣಗೆರೆ ಹಿರೇಮಠದ ಸ್ಥಿರಪಟ್ಟಾಧ್ಯಕ್ಷರಾಗಿದ್ದ ಡಾ. ಶ್ರೀ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಇವರ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮವು ಇಂದು ಸಂಜೆ 6.30ಕ್ಕೆ ನಡೆಯಲಿದೆ.
ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಕಬ್ಬಿಣ ಕಂಥಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ. ಕೈಗಾರಿಕೋದ್ಯಮಿ ಅಥಣಿ ವೀರಣ್ಣ, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹೆಚ್.ಜಿ.ವಿಜಯಕುಮಾರ್ ಇವರು ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ವಿಷಯ ಕುರಿತು ಉಪನ್ಯಾಸ ನೀಡುವರು.