ಹೊನ್ನಾಳಿ, ಮಾ. 4- ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಇದೇ ದಿನಾಂಕ 7ರಂದು ಬೆಳಿಗ್ಗೆ 11.30ಕ್ಕೆ ಈಶ್ವರ ದೇವಸ್ಥಾನದ ಕಳಸಾರೋಹಣ, ಕಾಳಿಕಾಂಬ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ಬಸವೇಶ್ವರ ಹಾಗೂ ಈಶ್ವರ ದೇವಸ್ಥಾನ ಸೇವಾ ಟ್ರಸ್ಟಿನ ಅಧ್ಯಕ್ಷ ಎಸ್.ಎಂ. ನಾಗರಾಜಪ್ಪ ತಿಳಿಸಿದರು.
ಹೊನ್ನಾಳಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಶಾಸಕ ಡಿ.ಜಿ. ಶಾಂತನಗೌಡ, ವಿಧಾನ ಪರಿಷತ್, ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಬಿ.ಪಿ. ಹರೀಶ್, ಬಸವರಾಜ್ ಶಿವಗಂಗಾ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಸಾಧು ವೀರಶೈವ ಸಮಾಜದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ತಾಲ್ಲೂಕು ಅಧ್ಯಕ್ಷ ಎಚ್.ಎ. ಗದ್ದಿಗೇಶ್, ಜಿ.ಪಂ. ಮಾಜಿ ಅಧ್ಯಕ್ಷೆ ದೀಪಾ ಜಗದೀಶ್ ಭಾಗವಹಿಸಲಿದ್ದಾರೆ ಎಂದರು.
ಅಂದು ಬೆಳಿಗ್ಗೆ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸುವ ಜತೆಗೆ ಬಸವೇಶ್ವರ ದೇವಸ್ಥಾನದಿಂದ ಈಶ್ವರ ದೇವಸ್ಥಾನದವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿದ್ದು, ರಾಜ್ಯದಲ್ಲಿನ ವಿವಿಧ ಕಲಾತಂಡಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಧರ್ಮಸಭೆ ಕಾರ್ಯಕ್ರಮದಲ್ಲಿ ಯಕ್ಕನಹಳ್ಳಿ ಗ್ರಾಮದ ವೀರಗಾಸೆ ಕಲಾವಿದ ಜಿ.ವಿ. ತಿಪ್ಪೇಶ್, ನಿವೃತ್ತ ಯೋಧ ಯಲವಟ್ಟಿ ಶಿವಕುಮಾರ್, ದಾವಣಗೆರೆ ವಿವಿಯ ಬಿಸಿಎ ಪದವಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಸುಮತಿ ಮೈದೂರು ಮಂಜುನಾಥ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಗುವುದು ಎಂದರು.
ನಾಟಕ ಪ್ರದರ್ಶನ: ಅಂದು ಸಂಜೆ 7.30ಕ್ಕೆ ವಿಶ್ವಬಂಧು ಮರುಳಸಿದ್ಧ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆೇೇ ಎಂದು ತಿಳಿಸಿದರು.
ಹಿರಿಯ ಮುಖಂಡರಾದ ಸಿ.ಬಿ. ಕುಬೇರಪ್ಪ, ಸಿ.ಎನ್. ಹಾಲೇಶಪ್ಪ, ಟಿ.ಎಸ್. ಜಗದೀಶ್, ಪಿ. ರಂಗಪ್ಪ, ಬಿ.ಎಂ. ಕರಿಬಸಪ್ಪ, ಎಸ್.ಬಿ. ಕೊಟ್ರೇಶ್, ಗ್ರಾಪಂ. ಮಾಜಿ ಅಧ್ಯಕ್ಷ ದಯಾನಂದ್, ರಾಮಾಂಜನೇಯ, ಸಿ. ಬಸವರಾಜ್, ಯು.ಬಿ. ಜಯಪ್ಪ ಉದ್ದಜ್ಜರ ಉಪಸ್ಥಿತರಿದ್ದರು.