ರಾಷ್ಟ್ರೀಯ ಲೋಕ ಅದಾಲತ್ ಮುಂದೂಡಿಕೆ

 ದಾವಣಗೆರೆ, ಮಾ.5-  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ  ಇದೇ ದಿನಾಂಕ 9 ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ತನ್ನು ಇದೇ ದಿನಾಂಕ 16 ಕ್ಕೆ ಮುಂದೂಡಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ. 

error: Content is protected !!