ನಗರದಲ್ಲಿ ಇಂದು `ಸಂಸಾಧನಾ’ ವಾರ್ಷಿಕೋತ್ಸವ

`ನಮ್ಮ ನಡೆ ಆರೋಗ್ಯದ ಕಡೆ’ ಎಸ್.ಎಸ್ ಕೇರ್ ಟ್ರಸ್ಟ್ ವತಿಯಿಂದ `ಸಂಸಾಧನ’ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ಸಂಜೆ 5 ಗಂಟೆಗೆ ನಗರದ ಬಿಐಇಟಿ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿದೆ.

ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶಿವರಾಜ್ ವಿ. ಪಾಟೀಲ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಟ್ರಸ್ಟ್ ಸಂಸ್ಥಾಪಕರಾದ ಶಾಮನೂರು ಶಿವಶಂಕರಪ್ಪ, ವ್ಯವಸ್ಥಾಪಕ ಟ್ರಸ್ಟಿ ಎಸ್.ಎಸ್. ಮಲ್ಲಿಕಾರ್ಜುನ್ ಭಾಗವಹಿಸುವರು. ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!