ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ವೈ.ಎಂ. ವಿಠಲರಾವ್ ಅಧ್ಯಕ್ಷತೆ ವಹಿಸುವರು. ಶ್ರೀ ತರಳಬಾಳು ವಿದ್ಯಾಸಂಸ್ಥೆ ಆಡಳಿತಾಧಿ ಕಾರಿ ಡಾ. ಹೆಚ್.ವಿ. ವಾಮದೇವಪ್ಪ ಕಾರ್ಯಕ್ರಮ ಉದ್ಘಾಟಿಸು ವರು. ಮುಖ್ಯ ಅತಿಥಿಗಳಾಗಿ ಡಯಟ್ ಪ್ರಾಚಾರ್ಯರಾದ ಎಸ್. ಗೀತಾ, ಕಾಲೇಜಿನ ಪ್ರಾಚಾರ್ಯ ಡಾ ಕೆ.ಟಿ. ನಾಗರಾಜನಾಯ್ಕ ಭಾಗವಹಿಸಲಿದ್ದಾರೆ. ಇದೇ ವೇಳೆ ಪಿಹೆಚ್‌ಡಿ ಪದವಿ ಪಡೆದ ಕಾಲೇಜಿನ ಉಪನ್ಯಾಸಕಿ ಡಾ.ಜಿ.ಹೆಚ್. ಆಶಾ ಅವರನ್ನು ಸನ್ಮಾನಿಸಲಾಗುವುದು.