ಜಿಲ್ಲೆಯಲ್ಲಿ ಮಾರ್ಚ್ ಪಡಿತರ ಧಾನ್ಯ ಹಂಚಿಕೆ

ದಾವಣಗೆರೆ, ಮಾ. 8 – ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ  ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ್ ಮಾರಿಹಾಳ್ ತಿಳಿಸಿದ್ದಾರೆ.

error: Content is protected !!