ಬಾಲಕನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ದಾವಣಗೆರೆ, ಮಾ.18- ಬಾಲಕನ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ.ಗಳ ದಂಡ ವಿಧಿಸಿದೆ. ನಗರದ ನಿವಾಸಿ ಆಂಜನೇಯ ಅಲಿಯಾಸ್ ಅನು ಶಿಕ್ಷೆಗೊಳಗಾದವ.  ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ 2022ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ ಎಂ.ಆರ್‌. ಚೌಬೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಎನ್. ಶ್ರೀಪಾದ್ ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. 

ಸಂತ್ರಸ್ಥ ಬಾಲಕನಿಗೆ ಸರ್ಕಾರದಿಂದ 6 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರಿ ವಕೀಲರಾದ ಸುನಂದ ಮಡಿವಾಳರ್ ವಾದ ಮಂಡಿಸಿದ್ದರು.

error: Content is protected !!