ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುವಂತಾಗಲಿ

ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುವಂತಾಗಲಿ

ದಾವಣಗೆರೆ, ಮಾ.19- ಮಹಿಳೆಗಳ ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿಶೇಷ ಸಾಧನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಕುವೆಂಪು ಭವನದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಣ್ಣು ಒಂದು ಶಕ್ತಿಯಾಗಿದೆ. ಇಂದಿನ ದಿನಮಾನಗಳಲ್ಲಿ ಮಹಿಳೆಯರಿಗೆ ಬೇಕಾದ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಲು ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.

ಡಾ. ಆರತಿ ಮಹಿಳೆಯರ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಇದೇ ವೇಳೆ ಮಹಿಳೆಯರಿಗೆ ವಿಶೇಷ ಸ್ಪರ್ಧೆ ಆಯೋಜಿಸಲಾಗಿತ್ತು. ತೀರ್ಪುಗಾರರಾಗಿ ಡಾ. ಆರತಿ ಸುಂದರೇಶ್ ಭಾಗವಹಿಸಿದ್ದರು.  ಚಂದ್ರಿಕಾ ಮಂಜುನಾಥ್ ವಿಜೇತರಿಗೆ ಬಹುಮಾನ ವಿತರಿಸಿದರು.

ಕದಳಿ ಮಹಿಳಾ ವೇದಿಕೆಯ ರಾಜ್ಯ ಸಮಿತಿ ಉಪ ಸಂಚಾಲಕಿ ಪ್ರಮೀಳಾ ನಟರಾಜ್‌, ಜಿಲ್ಲಾ ಘಟಕದ ಅಧ್ಯಕ್ಷೆ ಗಾಯತ್ರಿ ವಸ್ತ್ರದ್, ಗಾಯತ್ರಿ ಸಿದ್ದೇಶ್ವರ್, ವಿಜಯ ಚಂದ್ರಶೇಖರ್, ನಿರ್ಮಲ ಶಿವಕುಮಾರ್, ಸೌಮ್ಯ ಸತೀಶ್, ನಂದಿನಿ ಗಂಗಾಧರ್, ಟಿ. ನೀಲಾಂಬಿಕೆ, ವಿನೋದ ಅಜಗಣ್ಣನವರ್, ಮಮತಾ ನಾಗರಾಜ್, ಕೆ.ಆರ್. ವಸಂತ ಇತರೆ ಪದಾಧಿಕಾರಿಗಳು ಇದ್ದರು.

error: Content is protected !!