ಹಾಲಿವಾಣ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ

ಹರಿಹರ, ಏ.2-  ತಾಲ್ಲೂಕಿನ ಹಾಲಿವಾಣ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಏಳೂರು ಕರಿಯಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಜಾತ್ರೆ ನಡೆಯುವ ಸ್ಥಳ ಹಾಗೂ ದೇವಸ್ಥಾನಗಳಲ್ಲಿ ಮತ್ತು ಆವರಣದಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿ, ಪರಿಸರ ನೈರ್ಮಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ  ಕರಿಯಮ್ಮ ದೇವಿ ಜಾತ್ರೆಯಲ್ಲಿ ದೇವಸ್ಥಾನದ ಅಥವಾ ಜಾತ್ರಾ ಆವರಣದ ಪ್ರದೇಶದೊಳಗೆ ಭಕ್ತಾದಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ, ಕೋಣ ಬಲಿ ಕೊಡುವಂತಹ ಕೃತ್ಯವನ್ನು ನಿಷೇಧಿಸಿದ್ದು, ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ದತಿ ಆಚರಣೆಯಲ್ಲಿ ಭಾಗಿಯಾದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!