ದಾವಣಗೆರೆ, ಏ.3- ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಜಿ ಸಚಿವ ಹೆಚ್.ಆಂಜನೇಯ ಅವ ರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಡಿಬಿ ಕಾರ್ಯದರ್ಶಿ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.