ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ `ಶಿಕ್ಷಣದಲ್ಲಿ ರಂಗ ಕಲೆ’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮಹಾವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ವೈ. ವೃಷಭೇಂದ್ರಪ್ಪ ಕಾರ್ಯಾಗಾರ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಮಾಳೂರಿನ ಉಪನ್ಯಾಸಕ ಡಾ. ಸಾಸ್ವೆಹಳ್ಳಿ ಸತೀಶ್ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸೋಮಿನಕೊಪ್ಪ ಸಹ ಶಿಕ್ಷಕ ಅಣ್ಣಪ್ಪ ಒಂಟಿಮಾಳಗಿ, ಬಿಇಎ ಶಿಕ್ಷಣ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೆ. ಮುರುಗೇಶಿ ಭಾಗವಹಿಸಲಿದ್ದು, ಪ್ರಾಚಾರ್ಯರಾದ ಡಾ.ಎ.ಜೆ. ನೀತಾ ಅಧ್ಯಕ್ಷತೆ ವಹಿಸಲಿದ್ದಾರೆ.