ದಾವಣಗೆರೆ ದಕ್ಷಿಣದಲ್ಲಿ ಎಸ್ಸೆಸ್ ನೇತೃತ್ವದಲ್ಲಿ ಪ್ರಚಾರ ಆರಂಭ, ಸುಳ್ಳು ಹೇಳುವ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಕರೆ
ದಾವಣಗೆರೆ, ಏ. 18 – ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಪರ ರಾಜ್ ರೆಸಿಡೆನ್ಸಿಯಲ್ಲಿ ಜೈನ, ಪಟೇದಾರ್ ಮತ್ತು ವಿಷ್ಣು ಸಮಾಜದವರ ಸಭೆ ಕಳೆದ ವಾರ ನಡೆಯಿತು.
ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ದೇಶದಲ್ಲಿ 10 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 10 ವರ್ಷ ಕೇವಲ ಸುಳ್ಳು ಹೇಳಿಯೇ ಅಧಿಕಾರ ನಡೆಸಿತು ಎಂದು ದೂರಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಪ್ರತಿ ಬಾರಿಯೂ ಸಹ ನಮ್ಮನ್ನು ಬೆಂಬಲಿಸುತ್ತಾ ಬಂದಿರುವ ಈ ಸಮಾಜಗಳು ಮುಂದೆಯೂ ನಮ್ಮ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ
ಡಾ|| ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪನವರಾಗಲೀ, ಎಸ್.ಎಸ್.ಮಲ್ಲಿಕಾರ್ಜುನ್ ಅವರಾಗಲೀ ದಾವಣಗೆರೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವವರು ನಮ್ಮ ಬಳಿಗೆ ಬರುತ್ತಿದ್ದಾರೆ. ಇದು ನಮ್ಮ ಮನೆತನಕ್ಕೆ ದಾವಣಗೆರೆಯಲ್ಲಿನ ಜನತೆಗೆ ಭರವಸೆ ಎಂದು ಉದಾಹರಣೆ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ, ಚಂಪಾಲಾಲ್ ಡೆಲಿರಿಯಾ, ಶ್ರೀಮತಿ ಶೈಲಾ, ಮಹೇಂದ್ರ ಕುಮಾರ್, ಜಯಚಂದ್ರ ಜೈನ್, ಸಾವನ್ ಜೈನ್, ರಾಜು ಭಂಡಾರಿ, ಪ್ರವೀಣ್ ಪಿಂಟು, ಕಿಶೋರ್ ಕುಮಾರ್, ವಿಜಯಕುಮಾರ್ ಜೈನ್, ಕುಂದನ್ಮಾಲ್, ಈಶ್ವರಸಿಂಗ್,
ನಾಕೋಡ ಸುರೇಶ್, ಡಾ|| ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ.ಶೆಟ್ಟಿ, ಎ.ನಾಗರಾಜ್ ಮತ್ತಿತರರಿದ್ದರು.