ದಾವಣಗೆರೆ, ಏ. 18 – ನಗರದ ಕೆಬಿ ಬಡಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಪರ ಕಕ್ಕರಗೊಳ್ಳದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ, ತಾಲ್ಲೂಕು ಸ್ತ್ರೀಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಕುಂತಲಾ ಅವರ ನೇತೃತ್ವದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ, ತಾಲ್ಲೂಕು ಸ್ತ್ರೀಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಕುಂತಲಾ, ನಗರಸಭಾ ಮಾಜಿ ಸದಸ್ಯರಾದ ಗೀತಾ ಮುರುಗೇಶ್, ಶೈಲಜಾ ಜಗದೀಶ್ ಒಡೆಯರ್, ಗೀತಾ ಸೇರಿದಂತೆ ಹಲವು ಮಹಿಳಾ ನಾಯಕಿಯರು ಮನೆ ಮನೆಗೆ ತೆರಳಿ ವಿನಯ್ ಕುಮಾರ್ ರವರನ್ನು ಈ ಬಾರಿ ಬೆಂಬಲಿಸುವಂತೆ ಕೋರಿದರು.