ಭೌತಶಾಸ್ತ್ರ 218, ರಸಾಯನಶಾಸ್ತ್ರ ಪರೀಕ್ಷೆಗೆ 223 ಗೈರು
ದಾವಣಗೆರೆ,ಏ.19 – ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ, ಇನ್ನಿತರೆ ಕೋರ್ಸ್ಗಳಿಗೆ 2024 ನೇ ಸಾಲಿಗೆ ಪ್ರವೇಶ ಪಡೆಯಲು ಇಂದು ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.
ಬೆಳಗಿನ ಅವಧಿಯಲ್ಲಿ ನಡೆದ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ 218 ಹಾಗೂ ಮಧ್ಯಾಹ್ನ ನಡೆದ ರಸಾಯನ ಶಾಸ್ತ್ರ ಪರೀಕ್ಷೆಗೆ 223 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.
ನಗರದ 23 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು ಭೌತಶಾಸ್ತ್ರ ವಿಷಯ ವನ್ನು 12296 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು ಇದರಲ್ಲಿ 12078 ವಿದ್ಯಾ ರ್ಥಿಗಳು ಹಾಜರಾಗಿ 218 ವಿದ್ಯಾರ್ಥಿಗಳು ಗೈರು ಹಾಜರಾಗಿರುವರು. ರಸಾಯ ನಶಾಸ್ತ್ರ ವಿಷಯದ ಪರೀಕ್ಷೆಯನ್ನು 12296 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು 12073 ವಿದ್ಯಾರ್ಥಿಗಳು ಹಾಜರಾಗಿ 223 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ.