ಮೂಲತಃ ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದವರೂ, ಪಶು ಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕರೂ ಆಗಿದ್ದ ದಿ. ಡಾ. ಕೆ.ಜಿ. ಧನ್ಯ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾವತಿ ಎಂ.ಕೆ. ಅವರು ದಿನಾಂಕ 07.03.2024ರ ಗುರುವಾರ ಮಧ್ಯಾಹ್ನ 2.10ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ದಿನಾಂಕ 08.03.2024ರ ಶುಕ್ರವಾರ ಬೆಳಿಗ್ಗೆ 9.30ರವರೆಗೆ ದಾವಣಗೆರೆ ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಂಟಪದ ಎದುರಿನ ಮೃತರ ಸ್ವಗೃಹದಲ್ಲಿ ಇಡಲಾಗುವುದು. ನಂತರ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ತಾಲ್ಲೂಕು ಕಂದಗಲ್ಲು ಗ್ರಾಮದಲ್ಲಿರುವ ಜಮೀನಿನನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ವಿದ್ಯಾವತಿ
