ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಕಳೆದ 1 ತಿಂಗಳಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮದ ಮುಕ್ತಾಯ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಸಿಟಿ ಬಸ್ ನಿಲ್ದಾಣದ ಎದುರು ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಹಾಗೂ ಪದ್ಮ ಮೆಡಿಕಲ್ಸ್ನ ಸುನೀಲ್ ಉಪಸ್ಥಿತರಿರುವರು. ಕರುಣಾ ಟ್ರಸ್ಟ್ ಅಧ್ಯಕ್ಷ ಡಾ. ಹೆಚ್.ಎನ್. ಮಲ್ಲಿಕಾರ್ಜುನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ಶಿವನಕೆರೆ ಬಸವಲಿಂಗಪ್ಪ, ಬಸವರಾಜ ಒಡೆಯರ್, ಪ್ರೊ. ಎಂ. ಬಸವರಾಜ್ ಉಪಸ್ಥಿತರಿರುವರು.