ದಾವಣಗೆರೆ, ಏ.28- ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ಸೂಚಿಸಿದರು. ಈ ವೇಳೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಜೊತೆಯಲ್ಲಿದ್ದರು.
ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ಸಿದ್ದೇಶ್ವರ
![13 madara channayya 29.04.2024 ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ಸಿದ್ದೇಶ್ವರ](https://janathavani.com/wp-content/uploads/2024/04/13-madara-channayya-29.04.2024-860x387.jpg)