ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಷೋ
ದಾವಣಗೆರೆ, ಮೆ 1 – ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 11, 9, 12, 2, 3, ಮತ್ತು 4ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇಂದು ಭರ್ಜರಿ ರೋಡ್ ಷೋ ನಡೆಸಿದರು.
ನಂತರ ಎಸ್ಸೆಸ್ ಮಾತನಾಡಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಗ್ರಾಮಾಂತರ ಪ್ರದೇಶದವರು ಸದಾ ನಮ್ಮನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ಲೋಕಸಭೆಗೆ ಪ್ರಭಾ ಮಲ್ಲಿಕಾರ್ಜುನ್ ಅವರು ಸ್ಪರ್ಧಿಸಿದ್ದು, ಹೆಚ್ಚಿನ ಬೆಂಬಲ ನೀಡಬೇಕೆಂದು ಕರೆ ನೀಡಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ತರುವ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಬಂದ ತಕ್ಷಣ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವೊಂದಕ್ಕೆ ಮಾರ್ಚ್ ಅಂತ್ಯಕ್ಕೆ ಸುಮಾರು ರೂ.122 ಕೋಟಿಯಷ್ಟು ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.
ಇನ್ನು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪಂಚ ನ್ಯಾಯ ಪಚ್ಚೀಸ್ ಗ್ಯಾರೆಂಟಿ’ ಭರವಸೆಗಳನ್ನು ನೀಡಲಾಗಿದ್ದು, ಯುವ ನ್ಯಾಯದಡಿ ಯುವಕರಿಗೆ ಉದ್ಯೋಗ, ಮಹಿಳಾ ನ್ಯಾಯದಡಿ ಪ್ರತಿ ಮಹಿಳೆಗೆ 1 ಲಕ್ಷ ರೂ., ರೈತ ನ್ಯಾಯದಡಿ ಸ್ವಾಮಿನಾಥನ್ ಆಯೋಗವನ್ನು ಜಾರಿಗೊಳಿಸು ವುದು.
ನರೇಗಾ ಕೂಲಿ ಹಣವನ್ನು ರೂ. 400 ಕ್ಕೆ ಹೆಚ್ಚಿಸಲಾಗುವುದು ಸೇರಿದಂತೆ ಹಲವು ಯೋಜನೆ ಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಅದರಂತೆ ನಾವುಗಳು ಜಾರಿಗೆ ತರುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಸಾಧಿಕ್ ಪೈಲ್ವಾನ್, ಸೈಯದ್ ಸೈಪುಲ್ಲಾ, ಬಿ.ವೀರಣ್ಣ, ತಂಜೀಮ್ ಸಮಿತಿ ಅಧ್ಯಕ್ಷ ದಾದುಸೇಠ್, ಬುತ್ತಿ ಗಫೂರ್ ಸಾಬ್, ಸಿ.ಕೆ.ಮುಸ್ತಾಕ್, ಎಸ್.ಕೆ.ಅಮ್ಜದ್, ಎ.ಬಿ.ಹಬೀಬ್ ಸಾಬ್, ನವಾಜ್ ಖಾನ್,ಮನ್ಸೂರ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಕೆ.ಚಮನ್ ಸಾಬ್, ಸೈಯದ್ ಚಾರ್ಲಿ, ಹುರ್ ಬಾನು ಪಂಡಿತ್, ಜಾಕೀರ್ ಅಲಿ, ಕಬೀರ್ ಖಾನ್, ಎ.ಬಿ.ರಹೀಂ, ಅಯ್ಯಪ್ಪ ದಾದು, ಸೌಮ್ಯ ನರೇಂದ್ರ, ಮಾಜಿ ಸದಸ್ಯ ಪರಸಪ್ಪ, ಅಲ್ತಾಫ್ ಹುಸೇನ್, ಫಾರೂಕ್, ಮುನ್ನಾ ಪೈಲ್ವಾನ್, ಎನ್.ಕೆ.ಇಸ್ಮಾಯಿಲ್, ಲಾಲ್ ಆರೀಫ್, ಕೊಡಪಾನ ದಾದಾಪೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.