ದಾವಣಗೆರೆ, ಮೇ 5 – ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚಿನ್ನಸಮುದ್ರ ಗ್ರಾಮದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅದ್ಧೂರಿಯಾಗಿ ಪ್ರಚಾರ ಮಾಡಿದರು.
ಇದೇ ವೇಳೆ ಮಾಯಕೊಂಡ ಶಾಸಕ ಬಸವಂತಪ್ಪ ಮಾತನಾಡಿ, ಮೋದಿಯ ವಿರುದ್ಧ ವಾಗ್ದಾಳಿ ನಡೆಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರು ಈ ದೇಶದಲ್ಲಿ ಶಾಂತಿಯುತವಾಗಿ ಬದುಕಬೇ ಕೆಂದರೆ ಕೋಮುವಾದಿ ಬಿಜೆಪಿ ಪಕ್ಷವನ್ನು ಹೊರಗಿಟ್ಟು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ನೇರ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಬಾಯಿ ಶೇಖರ್ ನಾಯ್ಕ್, ಚಿನ್ನಸಮುದ್ರ ಗ್ರಾಮದ ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಸುರೇಶ ನಾಯ್ಕ್, ರೈತ ಹೋರಾಟಗಾರ ಶೇಖರ್ ನಾಯ್ಕ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡ ಮುದೇಗೌಡ್ರು ಗಿರೀಶ್ ಹಾಗೂ ಇತರರು ಭಾಗವಹಿಸಿದ್ದರು.