ದಾವಣಗೆರೆ, ಮೇ 6-ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 7 ರಿಂದ 9ರ ವರೆಗೆ ತೊಟ್ಟಿಲು ಪೂಜೆ, ಸಂಜೆ
5 ಗಂಟೆಗೆ ವಿದ್ಯುತ್ ಅಲಂಕೃತ ವಾದ ಭವ್ಯವಾದ ಹೂವಿನ ಮಂಟಪದಲ್ಲಿ ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆ ರಾಜಬೀದಿಗಳಲ್ಲಿ ಜರುಗಲಿದೆ.
ದಿನಾಂಕ 11ರ ಶನಿವಾರವಾರ ಸರ್ವ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.