ನ್ಯಾಮತಿ, ಮೇ 5 – ಚೀಲೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಕಾಂಗ್ರೆಸ್ ಪಕ್ಷ ಜಾತ್ಯತೀತ ಪಕ್ಷವಾಗಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್ ಸೇವಾ ಮನೋಭಾವನೆ ಹೊಂದಿದ್ದು, ಅವರನ್ನು ಲೋಕಸಭೆಗೆ ಆಯ್ಕೆ ಮಾಡುವ ಮೂಲಕ ಮತ್ತಷ್ಟು ಸೇವೆ ಮಾಡಲು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯ ದೊಡ್ಡೇರಿ ಡಿ.ಜಿ. ವಿಶ್ವನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷದ ದೀನ-ದಲಿತರ ಪರ ನಿಲುವಿಗೆ ಮನಸೋತು ನಮ್ಮ ಭಾಗದ ಅನೇಕ ಮಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ನುಡಿದರು.
ಚೀ. ಕಡದಕಟ್ಟೆ ಶೇಖರಪ್ಪ, ಕೆ.ಪಿ. ಸಿದ್ಧನಗೌಡ, ಸತೀಶ್ನಾಯ್ಕ, ಹೋಟೆಲ್ ಉಮೇಶ್, ಚೀಲೂರು ಗಿರೀಶ್, ರಮೇಶ್, ರಂಗನಾಥ್, ಶಿವರಾಜ್, ಮುಸ್ಸೇನಾಳ್ ಭೀಮಸೇನನಾಯ್ಕ, ಕೂಗೋನಹಳ್ಳಿ ಉಮೇಶ್ ಮತ್ತಿತರ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಡಿ.ಜಿ. ಶಾಂತನಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.