ದಾವಣಗೆರೆ ಸಿಟಿ ಜೆ.ಹೆಚ್. ಪಟೇಲ್ ಬಡಾವಣೆ ವಾಸಿ ಹಳೇಬಾತಿಯ ದಿ. ಕೋಟೆಹಾಳ್ ಕಲ್ಲಪ್ಪನವರ ಧರ್ಮಪತ್ನಿ ಶ್ರೀಮತಿ ಗಿರಿಜಮ್ಮನವರು ದಿನಾಂಕ 04.05.2024 ಶನಿವಾರ ಸಂಜೆ 5.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 88 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 5.5.2024ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗಿರಿಜಮ್ಮ
