ದಾವಣಗೆರೆ, ಮೇ 6- ಹೆಚ್ಚಿರುವ ತಾಪಮಾನ ಜನರ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಉಂಟು ಮಾಡುತ್ತಿದ್ದು, ರಾಜ್ಯದ ಮಹಾನಗರ, ನಗರ, ಪಟ್ಟಣಗಳಲ್ಲಿ ನಾಗರಿಕ ಸೌಲಭ್ಯಗಳನ್ನು ಒದಗಿಸುವ ಮುನಿಸಿಪಲ್ ಕಾರ್ಮಿಕರು, ಪೌರಕಾರ್ಮಿಕರು, ಕಸ ಸಾಗಾಣಿಕೆ ಮತ್ತಿತರರ ಕೆಲಸದ ಅವಧಿಯನ್ನು ಬದಲಿಸುವಂತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘವು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದೆ. ಬೆಳಿಗ್ಗೆ 10 ಗಂಟೆ ನಂತರ ಕೆಲಸ ಮಾಡುವುದು ಅಸಾಧ್ಯವಾಗಿದೆ. ಅಲ್ಲದೇ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ದೈಹಿಕ ಶ್ರಮವಹಿಸಿ ಹೊರಗಡೆ ದುಡಿವ ಎಲ್ಲಾ ಮುನಿಸಿಪಲ್ ಕಾರ್ಮಿಕರಿಗೆ ಬೆಳಿಗ್ಗೆ 6 ರಿಂದ 10 ಗಂಟೆ ತನಕ ಮಾತ್ರ ಕೆಲಸ ನಿಗದಿಪಡಿಸುವಂತೆ ಒತ್ತಾಯಿಸಿದೆ ಎಂದು ಸಂಘದ ಜಿಲ್ಲಾ ಸಂಚಾಲಕ ಕೆ.ಹೆಚ್.ಆನಂದರಾಜು ತಿಳಿಸಿದ್ದಾರೆ.
February 26, 2025