ಹರಿಹರ, ಮೇ 7- ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿಯನ್ನು ನಗರದಲ್ಲಿ ಇದೇ ದಿನಾಂಕ 10 ರಂದು ಶುಕ್ರವಾರ ಆಚರಿಸಲಾಗುತ್ತದೆ ಎಂದು ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಟಿ.ಜೆ. ಮುರುಗೇಶಪ್ಪ ತಿಳಿಸಿದರು.
ದಿನಾಂಕ 10 ರಂದು ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಬಸವೇಶ್ವರ ಸ್ವಾಮಿಗೆ ಮತ್ತು ಉತ್ಸವಮೂರ್ತಿಗೆ ರುದ್ರಾಭಿಷೇಕ ಅಲಂಕಾರ ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜೆ ಕಾರ್ಯಗಳು ನಡೆಯಲಿದೆ. ನಂತರ ಬೆಳಗ್ಗೆ 8-30 ಕ್ಕೆ ಎತ್ತುಗಳು ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ.