ಹೆೊನ್ನಾಳಿಯಲ್ಲಿಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. 

ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದ ಬಗ್ಗೆ ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!