ಹೊನ್ನಾಳಿ ತಾಲ್ಲೂಕು : ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ 2ನೇ ಸ್ಥಾನ

ಹೊನ್ನಾಳಿ ತಾಲ್ಲೂಕು : ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ 2ನೇ ಸ್ಥಾನ

ಹೊನ್ನಾಳಿ, ಮೇ 9- ಹೊನ್ನಾಳಿ – ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಶೇ.80.72 ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದಿದ್ದು, ಈ ಸಾಧನೆಯಿಂದಾಗಿ ಜಿಲ್ಲೆಯಲ್ಲಿ 2ನೇ ಸ್ಥಾನ ದಕ್ಕಿದೆ ಎಂದು ಬಿಇಒ ಎಸ್.ಸಿ.ನಂಜರಾಜ್ ಪತ್ರಿಕೆಗೆ ಮಾಹಿತಿ ನೀಡಿದರು.

ಅವಳಿ ತಾಲ್ಲೂಕುಗಳ 2 ಸರ್ಕಾರಿ ಮತ್ತು 4 ಖಾಸಗಿ ಸೇರಿದಂತೆ ಒಟ್ಟು 6 ಶಾಲೆಗಳು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.100 ಫಲಿತಾಂಶ ಪಡೆದಿವೆ. ಅವುಗಳಲ್ಲಿ ಹೊನ್ನಾಳಿ ಪಟ್ಟಣದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 25, ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ದುರ್ಗಿಗುಡಿಯ 35, ಗೊಲ್ಲರಹಳ್ಳಿಯ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ 37, ಹೆಚ್.ಕಡದಕಟ್ಟೆಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 50, ನ್ಯಾಮತಿ ತಾಲ್ಲೂಕಿನ ಮಾದನಬಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46, ಚೀಲೂರಿನ ರಾಷ್ಟ್ರೀಯ ಆಂಗ್ಲಮಾಧ್ಯಮ ಪ್ರೌಢಶಾಲೆಯ 35 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

error: Content is protected !!