ದಾವಣಗೆರೆ, ಮೇ 13- ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ಎಂಟ್ರಿ ಮುಖಾಂತರ ನೇರವಾಗಿ 2 ನೇ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 27 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2500/- ರಂತೆ ಶಿಷ್ಯವೇತನ ನೀಡಲಾಗುವುದು. ಆಯ್ಕೆಯಾದ ಪುರುಷ ಅಭ್ಯರ್ಥಿಗಳಿಗೆ ಆಯಾ ಐ.ಐ.ಹೆಚ್.ಟಿ ನಿಯಮಾನುಸಾರ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿರುತ್ತದೆ. ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಈ ಕಚೇರಿಯ ದೂರವಾಣಿ 08192-262362 ಯನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ – ಬೆಟಗೇರಿ – 587 102, (ಕರ್ನಾಟಕ) ಇವರಿಗೆ ನೇರವಾಗಿ ಸಲ್ಲಿಸಬೇಕು.
January 2, 2025