ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ವಿಚಾರ ಸಂಕಿರಣ

ದಾವಣಗೆರೆ ಜಿ.ಎಂ. ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ನಾಳೆ ದಿನಾಂಕ 14ರಿಂದ ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ಬಸವರಾಜ ಸ್ವಾಮಿ, `ವಾಣಿಜ್ಯ ಶಿಕ್ಷಣ – ಗಡಿ ದಾಟಿ ಸಂಪರ್ಕ – ಭವಿಷ್ಯ ರೂಪಿಸುವುದು’ ಎಂಬ ವಿಷಯದ ಕುರಿತು ಸಂಕಿರಣ ನಡೆಯಲಿದೆ ಎಂದು ಹೇಳಿದರು.

ನಾಳೆ ದಿನಾಂಕ 14ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ವಿಶ್ವವಿದ್ಯಾಲಯದ ಜಿ.ಎಂ. ಹಾಲಮ್ಮ ಸಭಾಂಗ ಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಜಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿ ಎಸ್.ಆರ್. ಶಂಕಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಬ್ರಿಟನ್‌ನ ಲಂಡನ್ ಸೌತ್ ಬ್ಯಾಂಕ್ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಲೆಬರ್ನ್ ರೋಸ್ ಹಾಗೂ  ಲಾರೆನ್ಸ್ ಫಿಶರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಬಾಷ್ ಇಂಡಿಯಾ ಫೌಂಡೇಷನ್‌ನ ಮಾಜಿ ಮುಖ್ಯಸ್ಥ ಒ.ಪಿ. ಗೋಯಲ್, ವಿಶ್ವೇಶ್ವರಾಯ ವಿಶ್ವವಿದ್ಯಾಲಯದ ಎಂ.ಬಿ.ಎ. ವಿಭಾಗದ ಅಧ್ಯಕ್ಷ ಎಂ.ಎಂ. ಮುನ್ಶಿ, ಲಂಡನ್ ಸೌತ್ ಬ್ಯಾಂಕ್ ವಿಶ್ವವಿದ್ಯಾಲಯದ ಉಪನ್ಯಾಸಕಿ ಪೂರ್ಣಿಮಾ ಚರಂತಿಮಠ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಸಂಕಿರಣದಲ್ಲಿ ಪಾಲ್ಗೊಳ್ಳಲು ಬಯಸುವವರು ವೆಬ್ ತಾಣವಾದ www.gmu.ac.in ಇಲ್ಲವೇ ಮೊ : 88004 41841 ಸಂಪರ್ಕಿಸಬಹುದು ಎಂದು ಬಸವರಾಜ ಸ್ವಾಮಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಎಂ. ವಿಶ್ವವಿದ್ಯಾಲಯದ ತರಬೇತಿ ಹಾಗೂ ಉದ್ಯೋಗ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ, ವಾಣಿಜ್ಯ ಹಾಗೂ ನಿರ್ವಹಣಾ ವಿಭಾ ಗದ ನಿರ್ದೇಶಕ ಶಿವಕುಮಾರ್, ಎಂ.ಬಿ.ಎ. ವಿಭಾಗದ ಮುಖ್ಯಸ್ಥ ಪಿ.ಎಸ್. ಬಸವರಾಜ್ ಉಪಸ್ಥಿತರಿದ್ದರು.

error: Content is protected !!