ನ್ಯಾಯಾಧೀಶರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ
ದಾವಣಗೆರೆ, ಮೇ 14 – ಪ್ರಜಾಪ್ರಭುತ್ವದ ನೆಲೆಯಲ್ಲಿ ಭಾರತದ ಸಂವಿಧಾನದ ತಳಹದಿಯಲ್ಲಿ ನ್ಯಾಯಾಂಗವು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ನೊಂದ ಕಟ್ಟಕಡೆಯ ಪ್ರಜೆಗಳಿಗೆ ಉತ್ತಮ ನ್ಯಾಯ ಒದಗಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ಅಭಿಪ್ರಾಯ ಪಟ್ಟರು.
ಜಿಲ್ಲಾ ವಕೀಲರ ಸಂಘ, ವತಿಯಿಂದ ವಕೀಲರ ಸಂಘದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವರ್ಗಾವಣೆಗೊಂಡ ನ್ಯಾಯಾಧೀಶರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ, ವಕೀಲರ ಮೆಚ್ಚುಗೆಗೆ ಪಾತ್ರರಾಗಿರುವುದು ಪ್ರಶಂಸನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ಕುಮಾರ್ ಮಾತನಾಡಿ, ನ್ಯಾಯಾಧೀಶರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯಾಯದ ಅಡಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗದ ಮೇಲೆ ಜನಸಾಮಾನ್ಯರಿಗೆ ವಿಶ್ವಾಸ, ನಂಬಿಕೆ ಬರುವಂತೆ ಮಾಡುವ ನಿಟ್ಟಿನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಪಾತ್ರ ಅತಿಮುಖ್ಯ ಎಂದರು.
ಈ ವೇಳೆ ವಕೀಲರಾದ ಕೆ.ಎಂ.ಮಲ್ಲಿಕಾರ್ಜುನಪ್ಪ, ರಾಘವೇಂದ್ರ ಶೆಟ್ಟಿ, ಬಳ್ಳಾರಿ ರೇವಣ್ಣ, ಎನ್.ಜಯದೇವನಾಯ್ಕ, ಎನ್.ಎಂ.ಆಂಜನೇಯ, ಟಿ.ಆರ್.ಗುರು ಬಸವರಾಜ್, ಡಿ.ಪಿ.ಬಸವರಾಜ್, ಆರ್.ಭಾಗ್ಯಲಕ್ಷ್ಮಿ ಅಭಿನಂದಿಸಿ, ಮಾತನಾಡಿದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಎನ್.ಪ್ರವೀಣ್ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜೆ.ವಿ.ವಿಜಯಾನಂದ್, ಜಿಲ್ಲಾ ಸತ್ರ ನ್ಯಾಯಾಧೀಶರು, ಎಸ್ಟಿಎಫ್ಸಿ ನ್ಯಾಯಾಧೀಶರಾದ ಎನ್.ಶ್ರೀಪಾದ್, ಜಿಲ್ಲಾ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಧೀಶರಾದ ಬಿ.ದಶರಥ, 3ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆಎಂಎಫ್ಸಿ ಆದ ಕೆ.ಅಫ್ತಾಬ್, ಜಿಲ್ಲಾ ನ್ಯಾಯಾಧೀಶರಾಗಿ ಮುಂಬಡ್ತಿ ಪಡೆದ ಪ್ರಧಾನ ಸಿವಿಲ್ ನ್ಯಾಯಾಧೀಶರೂ, ಸಿಜೆಎಂ ಆದ ಶಿವಪ್ಪ ಗಂಗಪ್ಪ ಸಲಗರೆ ಇವರಿಗೆ ಹೃದಯ ಸ್ಪರ್ಶಿಯಾಗಿ ಸನ್ಮಾನಿಸಲಾಯಿತು.
ಈ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್.ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್.ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಭಾಗ್ಯಲಕ್ಷ್ಮಿ, ಎಂ.ಚೌಡಪ್ಪ, ಎಲ್.ನಾಗರಾಜ್, ಕೆ.ಎಂ.ನೀಲಕಂಠಯ್ಯ, ಜಿ.ಜೆ.ಸಂತೋಷ್ಕುಮಾರ್, ವಾಗೀಶ್ ಕಟಗಿಹಳ್ಳಿ ಮಠ ಇತರರು ಇದ್ದರು.