ಹರಿಹರ, ಮೇ 14- ನಗರದ ಎಂ.ಕೆ.ಇ.ಟಿ, ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು 2023-24ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆದ ಸಿ.ಬಿ.ಎಸ್.ಇ ಪರೀಕ್ಷೆಯ ಫಲಿ ತಾಂಶ ಪ್ರಕಟವಾಗಿದ್ದು, ಶೇ.100ರಷ್ಟು ಫಲಿತಾಂಶ ಬಂದಿರುತ್ತದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
ಸ್ವರೂಪ್ ಆರ್.ದುರ್ಗೋಜಿ ಶೇ.94.6 ರಷ್ಟು ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಜಿ.ಆರ್.ಕೋಮಲ್ ಮತ್ತು ಮೇಘನ ಟಿ.ಗಂಗೂರ್ ಶೇ.93.8 ರಷ್ಟು ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಎಸ್.ಎಂ. ಸಂಜನಾ ಶೇ.93 ರಷ್ಟು ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಅನಘ ರಘುರಾಮ್ ಶೇ.92.2, ಜಿ.ದಿಗಂತ್ ಶೇ.92.2, ಚಂದನ್ ಆನಂದ್ ಬಡಿಗೇರ್ ಶೇ.91.6 ಅಂಕ ಪಡೆದು ತೇರ್ಗಡೆಯಾಗಿದ್ದಾರೆ.
34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಶ್ರೇಣಿ, 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 5 ವಿದ್ಯಾರ್ಥಿಗಳು ಉತ್ತೀರ್ಣ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಮಂಜುನಾಥ ಕುಲಕರ್ಣಿ ಅವರು ತಿಳಿಸಿದ್ದಾರೆ.
ಶಾಲೆಯ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.