ಪುಷ್ಪ ಶಾಮನೂರು ಮಹಾಲಿಂಗಪ್ಪ ಶಾಲೆಗೆ ಶೇ.100 ಫಲಿತಾಂಶ

ಪುಷ್ಪ ಶಾಮನೂರು ಮಹಾಲಿಂಗಪ್ಪ ಶಾಲೆಗೆ ಶೇ.100 ಫಲಿತಾಂಶ

ದಾವಣಗೆರೆ, ಮೇ 15 – ನಗರದ ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ಐಸಿಎಸ್‍ಇ ಶಾಲೆಯ  2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ.

ಶಾಲೆಯ ಒಟ್ಟು 18 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅದರಲ್ಲಿ 09 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 09 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 

ಚಂದನ್ ಎಸ್ ಶೇ.93.2, ಜವೇರಿಯ ಮುನಾಜಿಮ್ ಶೇ.93, ಅಕ್ಷರ ಎಂ.ಡಿ ಶೇ.92.8 ಅಂಕಗಳನ್ನು ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು, ಬೋಧಕ ವರ್ಗದವರು ಮತ್ತು ಸಂಸ್ಥೆಯ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

error: Content is protected !!