ದಾವಣಗೆರೆ, ಮೇ 16 – ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಇದೇ ದಿನಾಂಕ 19 ರಂದು ನಡೆಸಲಾಗುವುದು.
ವಿದ್ಯಾರ್ಥಿಗಳ ಪ್ರವೇಶ ಪತ್ರ ವನ್ನು ಜಿಲ್ಲಾ ಅಧಿಕಾರಿಗಳ ಕಚೆೀರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 44, ಜಿಲ್ಲಾಡಳಿತ ಭವನ, ಪಿ.ಬಿ ರಸ್ತೆ, ಕರೂರು ಕ್ರಾಸ್, ದಾವಣಗೆರೆ ಇಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರ ವನ್ನು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.