ದಾವಣಗೆರೆ, ಮೇ 19 – ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜೆಇಇ, ನೀಟ್, ಸಿಇಟಿ, ಇತರೆ ಅಕಾಡೆಮಿ, ಟ್ಯೂಟೋರಿಯಲ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಅನುಮತಿ ಪಡೆಯದೇ ಇಂತಹ ಕೋಚಿಂಗ್ ಸೆಂಟರ್ ಗಳನ್ನು ಪ್ರಾರಂಭಿಸುವ ಮೂಲಕ ಅನಧಿಕೃತವಾಗಿ ಜಾಹೀರಾತು ನೀಡಿ, ಸಾರ್ವಜನಿಕರಿಂದ ಮನಸೋ ಇಚ್ಚೆ ಹಣವನ್ನು ವಸೂಲಿ ಮಾಡುವುದು ಕಂಡು ಬಂದಿರುತ್ತದೆ ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳಿಗೆ ಪಾಠಗಳನ್ನು ಮಾಡುತ್ತಿರುವುದ ನ್ನು ಗಮನಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಎಲ್ಲಾ ಕೋಚಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನೊಂದಣಿಯಾಗಬೇಕಾಗಿರುತ್ತದೆ.
ನೋಂದಣಿಯಾಗದೇ ಕೋಚಿಂಗ್ ಸೆಂಟರ್ ನಡೆಸುತ್ತಿದ್ದಲ್ಲಿ, ಅನಿರೀಕ್ಷಿತ ಭೇಟಿ ನೀಡಿ ಕಾನೂನು ರೀತ್ಯ ಕ್ರಮ ಜರುಗಿಸಲಾಗವುದೆಂದು ಅವರು ತಿಳಿಸಿದ್ದಾರೆ.