ದಾವಣಗೆರೆ, ಮೇ 22- ನಗರದ ಜಿಎಂಐಟಿ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಎಂ.ಬಿ. ಸಂಜಯ್ ಪಾಂಡೆ ತಿಳಿಸಿದ್ದಾರೆ.
ಪರೀಕ್ಷೆ ಎದುರಿಸಿದ 59 ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳು ಅತ್ಯುನ್ನತ ಸ್ಥಾನದಲ್ಲಿ ಪಾಸಾಗಿದ್ದು, ಓರ್ವ ವಿದ್ಯಾರ್ಥಿ ಮಾತ್ರ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗಿದ್ದಾನೆ ಎಂದು ಪ್ರಕಟಣೆ ತಿಳಿಸಿದೆ.