ಜಿಲ್ಲಾಧಿಕಾರಿಗಳೊಂದಿಗೆ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್
ದಾವಣಗೆರೆ, ಮೇ 23- ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇರುವಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.
ಮತ್ತು ಕುಡಿಯುವ ನೀರು ಕೊರತೆಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿ ಕುಡಿಯುವ ನೀರು ಕಲುಷಿತ ವಾಗದಂತೆ ನೋಡಿಕೊಂಡು ಆಗಿಂದಾಗ್ಗೆ ಕುಡಿಯುವ ನೀರಿನ ಪರೀಕ್ಷೆ ನಡೆಸಬೇಕು ಎಂದರು.
ಇನ್ ಪುಟ್ ಸಬ್ಸೀಡಿ ರೈತರಿಗೆ ಬಿಡುಗಡೆ ಮಾಡಲಾಗಿದ್ದು ಯಾವ ರೈತರಿಗೆ ತಲುಪಿಲ್ಲವೋ ಅಂತಹ ರೈತರ ದಾಖಲೆ ಸರಿಪಡಿಸುವ ಮೂಲಕ ರೈತರಿಗೆ ನೆರವಾಗಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಕೃಷಿ ಚಟುವಟಿಕೆಗಳ ಸಿದ್ದತೆ ಕೈಗೊಂಡ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಭಾಗವಹಿಸಿದ್ದರು.