ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿ

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿ

ನಗರಸಭೆ ಮಾಜಿ ಅಧ್ಯಕ್ಷ ಆರ್.ಹೆಚ್. ನಾಗಭೂಷಣ್ ಕರೆ

ದಾವಣಗೆರೆ, ಮೇ 26- ನಗರದ ನಮನ ಅಕಾಡೆಮಿ ಹಾಗೂ ಶ್ರೀಲಂಕಾದ ಬೆಸಿಲಿಕ ಸ್ಫೋರ್ಟ್ಸ್ ಅಂಡ್ ಲೀಶರ್ ಜಂಟಿಯಾಗಿ ಸ್ಥಳೀಯ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿನ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಭವನದಲ್ಲಿ ಇಂಡೋ – ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವು ಮೊನ್ನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಮಾಜಿ ಅಧ್ಯಕ್ಷರೂ, ಸಾಂಸ್ಕೃತಿಕ ಪ್ರೋತ್ಸಾಹಕರೂ ಆದ ಆರ್.ಎಚ್. ನಾಗಭೂಷಣ್ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ತುಂಬಾ ಕಷ್ಟಕರ ಕೆಲಸ. ಒಳ್ಳೆಯ ಕಾರ್ಯಕ್ರಮಗಳಿಗೆ ನಾವು ಸದಾ ಬೆನ್ನೆಲುಬಾಗಿ ನಿಲ್ಲುತ್ತೇವೆ. ಇಂತಹ ಕಾರ್ಯಕ್ರಮಗಳು ದಾವಣಗೆರೆಯಲ್ಲಿ ಇನ್ನೂ ಹೆಚ್ಚು ಹೆಚ್ಚು ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದರು. 

ಇದೇ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾನಿ ಲಯದಿಂದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾಗಿರುವ ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ನಂತರ, ಶ್ರೀಲಂಕಾ ಹಾಗೂ ಭಾರತೀಯ ಶಾಸ್ತ್ರೀಯ, ಲಘು ಶಾಸ್ತ್ರೀಯ ನೃತ್ಯ ಪ್ರಸ್ತುತಿಗಳು ಸಭಾಸದರ ಮನಸೂರೆಗೊಳಿಸಿದವು.

error: Content is protected !!