ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಮಲ್ಲಿಕಾ 2024 ಸಾಂಸ್ಕೃತಿಕ ಹಬ್ಬ

ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಮಲ್ಲಿಕಾ 2024 ಸಾಂಸ್ಕೃತಿಕ ಹಬ್ಬ

ದಾವಣಗೆರೆ, ಮೇ 26 – ಶೈಕ್ಷಣಿಕ ಸಾಧನೆಗಾಗಿ ಕಾಲೇಜು ಉತ್ಸವದಲ್ಲಿ 20 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ ಉಡುಗೊರೆ ನಗರದ ಜಿ.ಎಂ. ವಿಶ್ವವಿದ್ಯಾಲಯ ದಲ್ಲಿ ಮಲ್ಲಿಕಾ 24.0 ಸಾಂಸ್ಕೃತಿಕ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಗೀತ, ನೃತ್ಯ ಮತ್ತು ಶೈಕ್ಷಣಿಕ ಮನ್ನಣೆಯಿಂದ ಗುರುತಿಸಲ್ಪಟ್ಟ ಒಂದು ಸಂಭ್ರಮದಲ್ಲಿ ಶೈಕ್ಷಣಿಕ ವರ್ಷದಲ್ಲಿ ಇದೇ ಮೊದಲ ಬಾರಿಗೆ 9.5 ಅಥವಾ ಅದಕ್ಕಿಂತ ಹೆಚ್ಚಿನ ಗಮ ನಾರ್ಹ  ಸಂಚಿತ ಗ್ರೇಡ್ ಪಾಯಿಂಟ್ ಸರಾಸರಿ ಅನ್ನು ಸಾಧಿಸಿದ 20 ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ 10 ಗ್ರಾಂ ಚಿನ್ನದ ನಾಣ್ಯಗಳನ್ನು  ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ. ಸಿದ್ದೇಶ್ವರ ನೀಡುವುದರ ಮೂಲಕ ಗೌರವಿಸಲಾಯಿತು. ಇದುವರೆಗೂ ಒಟ್ಟು 64 ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿರುತ್ತಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ ಎಂ. ಬಿ ತಿಳಿಸಿದರು.

ಚಿನ್ನದ ನಾಣ್ಯಗಳನ್ನು  ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ವಿಶ್ವ ವಿದ್ಯಾಲಯದ ಕುಲಪತಿ ಡಾ. ಶಂಖ ಪಾಲ್ ಎಸ್. ಆರ್ ಶ್ಲ್ಯಾಘಿಸಿದರು.

ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ. ಸಿದ್ದೇಶ್ವರ, ಜಿ.ಎಂ. ಪ್ರಸನ್ನ ಕುಮಾರ್, ಛೇರ್ಮನ್ ಶ್ರೀ ಶ್ರೀಶೈಲ ಎಜುಕೇಶನಲ್ ಟ್ರಸ್ಟ್, ಭೀಮ ಸಮುದ್ರ, ಆಡಳಿತಾಧಿಕಾರಿ ವೈ.ಯು. ಸುಭಾಶ್ಚಂದ್ರ, ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಮಹೇಶಪ್ಪ, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಸಂಜಯ್ ಪಾಂಡೆ, ರೆಜಿಸ್ಟ್ರಾರ್ ಡಾ. ಸುನಿಲ್ ಕುಮಾರ್ ಬಿ. ಎಸ್ ಹಾಗೂ ಕಾರ್ಯಕ್ರಮದ ಸಂಯೋಜಕರುಗಳಾದ ಡಾ. ಎಚ್. ಎಸ್. ಕಿರಣ್ ಕುಮಾರ್, ಎಂ. ಸಂತೋಷ್ ಕುಮಾರ್ ಹಾಗೂ  ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!