ಆದಿಲ್‌ ಕುಟುಂಬಕ್ಕೆ ನ್ಯಾಯ ಒದಗಿಸಲು ಎಸ್‌ಡಿಪಿಐ ಆಗ್ರಹ

ದಾವಣಗೆರೆ, ಮೇ 27- ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಆದಿಲ್ ಕುಟುಂಬಕ್ಕೆ 50 ಲಕ್ಷ ರೂ.ಗಳ ಪರಿಹಾರ ಸೂಚಿಸುವಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಯಹಿಯಾ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಎಫ್ಐಆರ್ ಇಲ್ಲದೇ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಸೂಚಿಸಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯನವರಿಗೆ ಮರಣೋತ್ತರ ಪರೀಕ್ಷೆಗೂ ಮುನ್ನ ಈ ಮಾಹಿತಿ ಯಾರು ನೀಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳೇ ಹೀಗೆ ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡಿದರೆ ಮೃತ ಕುಟುಂಬಕ್ಕೆ ನ್ಯಾಯ ಕೊಡಿಸುವವರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ. ಉದ್ರಿಕ್ತರಿಂದ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿರುವುದು ಖಂಡನೀಯ. ಆದರೆ ಈ ಕಲ್ಲು ತೂರಾಟ ಪ್ರಕರಣದಲ್ಲಿ ಅಮಾಯಕರ ಬಂಧನ ಆಗಬಾರದು  ಎಂದು ಮನವಿ ಮಾಡಿದ್ದಾರೆ.

error: Content is protected !!