ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ‘ವಿಶ್ವ ತಂಬಾಕು ರಹಿತ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪಾಲಿಕೆ ಆಯುಕ್ತರಾದ ರೇಣುಕ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮ ಅಧಿಕಾರಿ ಡಾ.ಜಿ.ಡಿ.ರಾಘವನ್ ಪ್ರಾಸ್ತಾವಿಕ ನುಡಿಗಳಾನ್ನಾಡುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಭಿತ್ತಿಪತ್ರ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ ಮತ್ತಿತರರು ಭಾಗವಹಿಸುವರು.