ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್

ದಾವಣಗೆರೆ, ಜೂ.3- ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರಸಕ್ತ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ. 44, `ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ,  ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಶಾಲಾ ಆಯ್ಕೆಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಕಡ್ಡಾಯವಾಗಿ ಕೌನ್ಸಿಲಿಂಗ್‍ನಲ್ಲಿ ಭಾಗವಹಿಸಬೇಕು.

ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 6 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ, ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಕೌನ್ಸಿಲಿಂಗ್ ನಡೆಸಲಾಗುವುದು. ಈ ದಿನಾಂಕಗಳಂದು ಕೌನ್ಸಿಲಿಂಗ್‍ನಲ್ಲಿ ಭಾಗ ವಹಿಸದೇ ಇರುವ ವಿದ್ಯಾರ್ಥಿಗಳನ್ನು ಪ್ರವೇಶಾತಿಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 08192-250022 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

error: Content is protected !!