ದಾವಣಗೆರೆ, ಜೂ. 12 – ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಮ್ಮ ಗೃಹ ಕಚೇರಿಯಲ್ಲಿ ನೀಡಿದ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ನೆನೆಗುದಿಗೆ ಬಿದ್ದಿರುವ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಅತೀ ಶೀಘ್ರವಾಗಿ ನಡೆಸಲು ಪ್ರಯತ್ನಿಸುವುದಾಗಿ ಸಂಸದರು ಜಿಲ್ಲಾ ಕಸಾಪ ಬಳಗಕ್ಕೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್‌ನ ಅಧ್ಯಕ್ಷ ಬಿ. ವಾಮದೇವಪ್ಪ, ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನ್ನುವ ಹೆಗ್ಗಳಿಕೆಯನ್ನು ಹೊಂದಿರುವ ತಾವು, ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವಂತೆ ಸಲಹೆ ನೀಡಿದರು. ಈ ಹಿಂದೆ ದಿ. ಜೆ.ಹೆಚ್. ಪಟೇಲರು ಕೂಡಾ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು ಎಂದು ವಾಮದೇವಪ್ಪ ಸ್ಮರಿಸಿದರು.
ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೂಡ ಈ ಸಂದರ್ಭದಲ್ಲಿ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ ಅವರು ಸಂಸದರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ, ಕೆ. ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿ ಜಗದೀಶ್, ಜಿಗಳಿ ಪ್ರಕಾಶ್, ಪದಾಧಿಕಾರಿಗಳಾದ ಎನ್.ಎಸ್. ರಾಜು, ಜ್ಯೋತಿ ಉಪಾಧ್ಯಾಯ, ಎಸ್.ಎಂ. ಮಲ್ಲಮ್ಮ, ರುದ್ರಾಕ್ಷಿ ಬಾಯಿ, ನಾಗರಾಜ್ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ಬೇತೂರು ಎಂ.ಷಡಾಕ್ಷರಪ್ಪ, ಆರ್. ಶಿವಕುಮಾರ್, ಪಂಕಜ, ಕುರ್ಕಿ ಸಿದ್ದೇಶ್, ಬಕ್ಕೇಶ್ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ. ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.